ಕಾರ್ಕಳ ಡಿ.16: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿAದ ಅತೀವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಬೈಲೂರು ಪೇಟೆಯಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಸುಧಾಕರ(40) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಧಾಕರ ಅವರು ಬೈಲೂರಿನ ರಾಜಾಪುರ ಸೊಸೈಟಿ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ಎನ್ಫೀಲ್ಡ್ ಬುಲೆಟ್ ಬೈಕ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸುಧಾಕರ್ ಅವರ ತಲೆ ಹಾಗೂ ಕೈಕಾಲಿಗೆ ಗಂಭೀರ ಗಾಯಗಳಾಗಿದ್ದು ಬುಲೆಟ್ ಸಹಸವಾರನಿಗೂ ತರಚಿದ ಗಾಯಗಳಾಗಿವೆ. ಬೈಕ್ ಸವಾರ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.