ನವದೆಹಲಿ, ಡಿ.27: ಭಯೋತ್ಪಾದಕ ಕೃತ್ಯದಲ್ಲಿ ತೊಡಗಿಕೊಂಡ ಆರೋಪದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇತ್ತೀಚೆಗೆ ನಡೆಯುತ್ತಿರುವ ಸತತ ಉಗ್ರ ದಾಳಿ ನಡೆಯುತ್ತಿದ್ದು ಈ ಕೃತ್ಯಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ಇದೆ ಎಂದು ಆರೋಪಿಸಲಾಗಿದ್ದು,ಜತೆಗೆ ದೇಶದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುವ ಮೂಲಕ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎನ್ನಲಾಗಿದೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಮಹತ್ತರ ಬದಲಾವಣ ಮಾಡಿರುವ ಕೇಂದ್ರ ಸರ್ಕಾರ, ಉಗ್ರರ ಮೂಲವನ್ನೇ ಟಾರ್ಗೆಟ್ ಮಾಡಿ ಬೇರು ಸಹಿತ ಕಿತ್ತು ಹಾಕುವ ಪ್ರಯತ್ನ ಮಾಡುತ್ತಿದೆ. ಇದೀಗ ಜಮ್ಮ ಮುತ್ತು ಕಾಶ್ಮೀರದಲ್ಲಿ ಭಯೋತ್ಪಾದನ ಚಟುವಟಿಕೆ ನಡೆಸುತ್ತಾ, ಮುಸ್ಲಿಂ ಆಳ್ವಿಕೆ, ಪ್ರತ್ಯೇಕತಾ ವಾದ, ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಲೀಗ್(ಮಸರತ್ ಅಲಂ ಬಣ)ವನ್ನು ಕೇಂದ್ರ ಸರ್ಕಾರ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿದೆ.ಮುಸ್ಲಿಂ ಸಮುದಾಯದ ಅಭಿವೃದ್ಧಿ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳ ಹೆಸರಿನಲ್ಲಿ ನೋಂದಣಿಯಾಗಿರುವ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ) ಬಣವು ಭಯೋತ್ಪಾದಕ ಚಟುವಟಿಕೆಯಲ್ಲಿ ಸಕ್ರಿಯವಾಗಿತ್ತು ಎಂಬ ಆರೋಪವಿದೆ. ಈ ಸಂಘಟನೆ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಕೇಂದ್ರ ಸರ್ಕಾರ ಇದೀಗ ಜಮ್ಮು ಕಾಶ್ಮೀರದ ಮುಸ್ಲಿಂ ಲೀಗ್(ಮಸರತ್ ಆಲಂ) ಬಣವನ್ನು ನಿಷೇಧಿಸಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಬಣವನ್ನು ಮಸರತ್ ಅಲಂ ಮುನ್ನಡೆಸುತ್ತಿದ್ದ. ಈತ ಆಲ್ ಇಂಡಿಯನ್ ಹುರಿಯತ್ ಕಾನ್ಫರೆನ್ಸ್ ಹಂಗಾಮಿ ಮುಖ್ಯಸ್ಥನಾಗಿದ್ದಾನೆ. ಕಾಶ್ಮೀರ ಪ್ರತ್ಯೇಕತವಾದಿ ಸೈಯದ್ ಆಲಿ ಶಾ ಗಿಲಾನಿ ನೇತೃತ್ವದಲ್ಲಿ ಹುರಿಯತ್ ಕಾನ್ಫರೆನ್ಸ್ ಮುನ್ನಡೆಯುತ್ತಿತ್ತು. ಗಿಲಾನಿ 2021ರಲ್ಲಿ ಮೃತಪಟ್ಟಿದ್ದ. ಬಳಿಕ ಅಸರತ್ ಅಲಂನನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿತ್ತು. ಇದೇ ಮಸರತ್ ಅಲಂ ನಾಯಕತ್ವದಲ್ಲಿ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಹಲವು ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ