Share this news

ಇಸ್ಲಾಮಬಾದ್: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಉಗ್ರ ಕೈಸರ್ ಫಾರೂಕ್ ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗಿದ್ದಾನೆ.

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾಗಿದ್ದ ಕೈಸರ್ ಫಾರೂಕ್, ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟ ಸಹವರ್ತಿಯಾಗಿದ್ದ. ಹಲವು ಭಾರತ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ.

2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ಆಪ್ತ ಸಹಾಯಕನಾಗಿದ್ದ. ಉಗ್ರ ಫಾರೂಕ್ ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

 

 

 

 

Leave a Reply

Your email address will not be published. Required fields are marked *