ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹದ ಭೀತಿ ಎದುರಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾಲೆ ವರೆಗಿನ ತರಗತಿಗಳಿಗೆ ನಾಳೆ (ಜುಲೈ 27ರಂದು) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ ಪೂರ್ವ ಹಾಗೂ ಪದವಿ ಡಿಪ್ಲೋಮೋ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣದ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ