ಉಡುಪಿ/ ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ( ಜುಲೈ 26) ರಜೆ ಮುಂದುವರಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಮುಂದುವರಿಸಿ ಆದೇಶ ಹೊರಡಿಸಿದ್ದಾರೆ.
ಜುಲೈ 25ರಂದು ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿತ್ತು .ಇದೀಗ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.
ಈ ಕುರಿತು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
