Share this news

ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು ಪೊಲೀಸರು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಮಂಗಳೂರಿನ ಕೊಡಿಯಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಇಂದು ದಿಢೀರ್ ದಾಳಿ ನಡೆಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಗುಮಾನಿ ಹಿನ್ನೆಲೆ ದಿಢೀರ್ ದಾಳಿ ನಡೆಸಿದ್ದಾರೆ. ಡಿಸಿಪಿ, ಎಸಿಪಿ, ಸೇರಿದಂತೆ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *