Share this news
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡ ಆಟೋ ಚಾಲಕನಿಗೆ  ಇಂದು(ಮಾ.22) ಗುರು ಬೆಳದಿಂಗಳು ​ಫೌಂಡೇಶನ್​ನಿಂದ 6 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಲಾಯಿತು.

 2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. 

ಆದರೆ ಈ  ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಈ ವಿಷಯ ತಿಳಿದ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು. ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್​ ನೀಡಿದ್ದಾರೆ. ಇನ್ನು ಮಗಳ ಇ.ಎಸ್.ಐ ಯೋಜನೆಯಿಂದಲೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನ ಕುಟುಂಬ ಭರಿಸಿತ್ತು. ಆದರೆ ಈವರೆಗೂ ಪುರುಷೋತ್ತಮ್​ಗೆ ಸರ್ಕಾರದ ಪರಿಹಾರ ಲಭಿಸಿಲ್ಲ. ಸದ್ಯ ಸರ್ಕಾರದ ಪರಿಹಾರಕ್ಕಾಗಿ ಪುರುಷೋತ್ತಮ್ ಕುಟುಂಬ ಕಾಯುತ್ತಿದೆ.

Leave a Reply

Your email address will not be published. Required fields are marked *