Share this news

ಮಂಗಳೂರು : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಒಡಿಸ್ಸಾದ ಸ್ಟೆಷಲ್ ಟಾಸ್ಕ್ ಫೋರ್ಸ್ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀರ್‌ಗೆ ಐಸೀಸ್ ಏಜೆಂಟ್‌ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಉಗ್ರ ಶಾರೀಕ್ ಬಳಿಯಿದ್ದ ಸಿಮ್ ಕಾರ್ಡ್ಗೆ ಒಡಿಸ್ಸಾ ನಂಟು ಬೆಸೆದಿತ್ತು. ಒಡಿಸ್ಸಾ ಮೂಲದ ಪ್ರೀತಂಕಾರ್ (೩೧) ಎಂಬಾತನೇ ಶಾರೀಕ್‌ಗೆ ಸಿಮ್ ಪೂರೈಕೆ ಮಾಡಿದ್ದ. ಮಾಹಿತಿ ತಿಳಿದ ಒಡಿಸ್ಸಾದ ಸ್ಟೆಷಲ್ ಟಾಸ್ಕ್ ಫೋರ್ಸ್, ಪ್ರೀತಂಕಾರ್‌ನನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದರು. ಈ ವೇಳೆ, ಪಾಕಿಸ್ತಾನದ ಐಎ ಏಜೆಂಟ್ ಒಬ್ಬನಿಗೆ ಪ್ರೀತಂಕಾರ್ ಸಿಮ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಪೂರೈಸಿದ್ದ. ನಂತರ ಆ ಸಿಮ್ ಕಾರ್ಡ್ ಅನ್ನು ಐಎಸ್‌ಐ ಏಜೆಂಟ್ ಉಗ್ರ ಶಾರೀಕ್‌ಗೆ ನೀಡಿದ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ ಒಡಿಸ್ಸಾ ಎಸ್‌ಟಿಎಫ್ ತಂಡ ಮಾಹಿತಿ ನೀಡಿದೆ. ಪ್ರೀತಂಕಾರ್ ದೇಶವಿರೋಧಿ ಕೃತ್ಯ, ಸೈಬರ್ ವಂಚನೆಗಳಿಗೆ ಒಟಿಪಿ ಮಾರಾಟ ಮಾಡುತ್ತಿದ್ದ. ಬ್ಯಾಂಕ್ ಅಕೌಂಟ್ ಹ್ಯಾಕ್, ನಕಲಿ ಸಿಮ್ ಕಾರ್ಡ್ ಮಾರಾಟ ಕೃತ್ಯದಲ್ಲಿ ತೊಡಗಿಕೊಂಡಿರುವ ಆರೋಪಿ ಪ್ರೀತಂಕಾರ್‌ನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ಐಎಸ್‌ಐಎಸ್ ಉಗ್ರ ಸಂಘಟನೆ ಸ್ಫೋಟದ ಹೊಣೆ ಹೊತ್ತಿತ್ತು. ಐಸಿಸ್ ಸಂಘಟನೆಯ ವಕ್ತಾರ ಐಎಸ್‌ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿತ್ತು.

ಇತ್ತೀಚೆಗೆ ಶಂಕಿತ ಉಗ್ರ ಶಾರೀಕ್‌ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ಣುತಪ್ಪಿಸಿ ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುವುದು ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

Leave a Reply

Your email address will not be published. Required fields are marked *