ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ.
ನಿನ್ನೆ (ಮಾರ್ಚ್ 29) ರಾತ್ರಿ ಎಡಮಂಗಲ ಗ್ರಾಮದ ಇಡ್ಯಟ್ಕ ಎಂಬಲ್ಲಿ ನಡೆಯುತ್ತಿದ್ದ ಶಿರಾಡಿ- ಕಲ್ಕುಡ ದೈವದ ನೇಮೊತ್ಸವ ವೇಳೆ ಶಿರಾಡಿ ದೈವದ ನರ್ತಕರಾಗಿ ಕುಣಿಯುತ್ತಿದ್ದರು. ಆ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಯಲಿಲ್ಲ. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ದೈವ ನರ್ತಕನ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು