ದಕ್ಷಿಣಕನ್ನಡ : ಮಂಗಳೂರು ಸುರತ್ಕಲ್ ನ ಬಾಳ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೆಡಿಕಲ್ ಶಾಪ್ನನಲ್ಲಿ ಕೆಲಸ ಮಾಡುತ್ತಿದ್ದ ಬಾಳ ನಿವಾಸಿ ದಿವ್ಯಾ (26) ಮೃತಪಟ್ಟ ಮಹಿಳೆ .ಪತಿ ಹರೀಶ್ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.
ದಿವ್ಯಾ ತನ್ನ ಪತಿ ಜೊತೆ ನೆರೆ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆದರೆ ಕಾರ್ಯಕ್ರಮ ಮುಗಿಸಿ ದಿವ್ಯಾ ಒಬ್ಬರೇ ಮನೆಗೆ ವಾಪಸ್ಸಾಗಿದ್ದರು. ಪತಿ ಸ್ವಲ್ಪ ತಡವಾಗಿ ಕಾರ್ಯಕ್ರಮದಿಂದ ಹೊರಟು ಬಂದರು.
ಮನೆಗೆ ಬಂದು ದಿವ್ಯಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.