Share this news

ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಪ್ರಯತ್ನಗಳು ಮತ್ತು ಮುಂದಾಲೋಚನೆಯಿಂದಾಗಿ “ವಂದೇ ಭಾರತ್” ಎಕ್ಸ್ಪ್ರೆಸ್ ರೈಲು ಭಾರತದ ರೈಲು ಮಾರ್ಗಗಳ ಅಭಿವೃದ್ಧಿಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸ್ತುತ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಅತಿ ಅಗತ್ಯವಾಗಿರುವ ಮಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಸಂಚಾರಕ್ಕಾಗಿ ಸಂಸದರ ಮೂಲಕ ಕೇಂದ್ರ ಸಚಿವರಿಗೆ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಪರ್ಕದಿಂದಾಗಿ ನಮ್ಮ ಕರಾವಳಿ ಕರ್ನಾಟಕದ ಜನತೆಯು ವ್ಯಾಪಾರ, ವ್ಯವಹಾರ, ಆರ್ಥಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರದೇ, ವಿವಿಧ ಆಯಾಮಗಳಲ್ಲಿ ಮುಂಬೈನೊಂದಿಗೆ ನಿಕಟವಾದ ಸಂಪರ್ಕವನ್ನು ಹೊಂದಿದ್ದಾರೆ. ಪ್ರತಿನಿತ್ಯ ನೂರಾರು ಜನರು ಮುಂಬೈ ಮಹಾನಗರಕ್ಕೆ ಸಂಚರಿಸುತ್ತಿದ್ದು, ವಂದೇ ಭಾರತ್’ ಎಕ್ಸ್ಪ್ರೆಸ್ ರೈಲನ್ನು ಆರಂಭಿಸುವುದರಿಂದ ಪ್ರಯಾಣದ ಅವಧಿ ಹಾಗೂ ಆರ್ಥಿಕ ಹಿತದೃಷ್ಟಿಯಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. 
ಈ ನಿಟ್ಟಿನಲ್ಲಿ ಮಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಶಾಸಕರಾದ ವಿ ಸುನಿಲ್ ಕುಮಾರ್ ಅವರು ಮನವಿ ಮಾಡಿದ್ದಾರೆ.

 

 

 

 

 

Leave a Reply

Your email address will not be published. Required fields are marked *