ಮಂಗಳೂರು: ಖಾಸಗಿ ಬಸ್ಸಿನ ನಿರ್ವಾಹಕರ ಬಸ್ಸು ಚಲಿಸುತ್ತಿದ್ದ ವೇಳೆ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಯುವಕ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಯುವಕ ಈರಯ್ಯ (23) ಮೃತಪಟ್ಟ ದುರ್ದೃವಿ. ಕದ್ರಿ ಕೆ ಪಿ ಟಿ ಇಂದ ಆಗ್ನೆಸ್ ಕಡೆಗೆ ಹೋಗುತ್ತಿದ್ದ ಬಸ್ಸು ನಂತೂರು ವೃತ್ತದಲ್ಲಿ ಒಮ್ಮೆಲೇ ಟರ್ನ್ ತೆಗೆದುಕೊಂಡಾಗ ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಪೊಲೀಸರು ಹಾಗೂ ಸಾರ್ವಜನಿಕರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ಗಂಭೀರವಾದ ಗಾಯವಾಗಿದ್ದ ಪರಿಣಾಮ ರಾತ್ರಿ 8 ಗಂಟೆ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಸಾವನ್ನಪ್ಪಿದ್ದಾನೆ.
ಈ ಘಟನೆ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬಸ್ ವೇಗವಾಗಿ ಚಲಿಸಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ .
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.