Share this news

ಮಂಗಳೂರು : ನಗರದ ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ ಎಮ್.ಡಿ.ಎಮ್.ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ ಯಾನೆ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆಯಾಗಿದೆ.

ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಮ್.ಡಿ.ಎಮ್.ಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದರು. ಆರೋಪಿತನಿಂದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ ಎಮ್.ಡಿ.ಎಮ್.ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾ ಸೇರಿ ಒಟ್ಟು 5,11,000 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ರೀ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ಆತನಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *