Share this news

ಮಂಡ್ಯ : ತಾಲೂಕಿನ ಹನಕೆರೆ ಗ್ರಾಮದ ಬಳಿ 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಿದೆ. 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ನರೇಂದ್ರ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದರು. ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ ಎಂದು ಮೋದಿ ಹೇಳಿದ್ದಾರೆ. ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ನಂತರ ಮಾತನಾಡಿದ ಮೋದಿ  ಕರ್ನಾಟಕದಾದ್ಯಂತ ಸಂಪರ್ಕವನ್ನು ಹೆಚ್ಚಿಸುವ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಇಲ್ಲಿಂದ ಪ್ರಾರಂಭಿಸಲಾಗುತ್ತಿದೆ .

ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿಯಲ್ಲಿ ಒಡೆಯರ್‌ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಡಬಲ್‌ ಇಂಜಿನ್‌ ಸರ್ಕಾರದಿಂದ ಬದಲಾವಣೆಯಾಗಿದೆ. ಕಳೆದ ಕೆಲವು ವರ್ಷದಲ್ಲಿ ಇಂದು ಲಕ್ಷ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿಗೆ ನಾಂದಿಯಾಗಿದೆ ಎಂದರು.

ದಶಪಥ ಹೆದ್ದಾರಿಯಿಂದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬೆಳೆಯಲಿದೆ. 2014ಕ್ಕಿಂತ ಮೊದಲು ದೇಶದ ಬಡವರ ಬಗ್ಗೆ ಕಾಳಜಿ ತೋರಿಸಲಿಲ್ಲ. ಬಡವರ ಹೆಸರಿನ ಯೋಜನೆಯಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿದರು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2014ರಲ್ಲಿ ದೇಶದ ಜನರು ನನಗೆ ಆಶೀರ್ವಾದ ನೀಡಿದರು. ಬಡವರ ಕಷ್ಟಗಳನ್ನು ಅರಿತುಕೊಂಡು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ 9 ವರ್ಷಗಳಲ್ಲಿ ಕೇಂದ್ರ ಯೋಜನೆಯಿಂದ ಬಡವರ ಬದುಕು ಹಸನಾಗಿದೆ ಎಂದರು.

ಕರ್ನಾಟಕದಲ್ಲೂ ಬಡವರಿಗೆ ಮನೆ ನಿರ್ಮಾಣ, ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ಜಲ್​ಜೀವನ್ ಮಿಷನ್​ನಡಿ 40 ಲಕ್ಷ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಹಣ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 3 ಲಕ್ಷಕ್ಕೂ ಹೆಚ್ಚು ರೈತರಿಗೆ 600 ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

 

Leave a Reply

Your email address will not be published. Required fields are marked *