Share this news

ಕಾರ್ಕಳ: ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ ಎಂ ಎ ಪೈ ಅವರ 125 ನೇ ಜನ್ಮದಿನಾಚರಣೆ ಯ ಅಂಗವಾಗಿ ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ ಅಪರೂಪದ ನಾಯಕ ಡಾ. ಟಿ.ಎಂ.ಎ. ಪೈ. ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದೆ ಎಂದು ಕಾರ್ಕಳ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ್ ಹೇಳಿದರು.

ಅವರು ಗುರುವಾರ ಹೊಟೇಲ್ ಕಟೀಲ್ ಇಂಟರ್ ನ್ಯಾಶನಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಣಿಪಾಲ್ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ ಎಂದರು.

ಮಾಹೆ ಮಣಿಪಾಲದ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು 2000 ರಲ್ಲಿ ಪ್ರಾರಂಭಿಸಲಾಯಿತು. ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯ ವಾಗದಿದ್ದರೂ ಎಲ್ಲರಿಗೂ ರಿಯಾಯಿತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 500/-, ಕುಟುಂಬಕ್ಕೆ ₹ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 950/- ಆಗಿರುತ್ತದೆ.
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು,
ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ
• ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ
• ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
• ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
• ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ
• ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ ಪಡೆಯಬಹುದು.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು.

ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಕಾರ್ಕಳದ ನಟೇಶ್ ,ಪ್ರತಿನಿಧಿಯಾದ ಚೇತನ್ ಉಪಸ್ಥಿತರಿದ್ದರು.

2023ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
– ಸೈಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಕಾರ್ಕಳ ಮತ್ತು ಅದರ ಎಲ್ಲಾ ಶಾಖೆಗಳು – 8884414389
– ಶ್ರೀ ನಾರಾಯಣ ನಾಯಕ್ – 9964684643 – ಶ್ರೀ ಹರೀಶ್ ಬಿ ಆಚಾರ್ಯ – 9945857561
– ಶ್ರೀ ಪ್ರಜ್ವಲ್ ಕುಲಾಲ್ – 8970801349 – ಶ್ರೀಮತಿ ಪ್ರಮೀಳಾ ಹರೀಶ್ – 9448309372

 

 

 

 

 

 

 

 

Leave a Reply

Your email address will not be published. Required fields are marked *