ಬಂಟ್ವಾಳ :ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದ ಪಾಠಗಳಿಗೆ ಕತ್ತರಿ ಪ್ರಯೋಗ ಮಾಡುವ ಮೂಲಕ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ಸರ್ಕಾರ ಇದರಿಂದ ಹಿಂದೆ ಸರಿಯದಿದ್ದರೆ ಮುಂದೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಎಚ್ಚರಿಕೆ ನೀಡಿದ್ದಾರೆ.

ಅವರು ಬಿಸಿರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾತನಾಡಿ, ಜನರಿಗೆ ಆಮಿಷ ಒಡ್ಡಿ ಬಲವಂತದ ಮತಾಂತರ ಮಾಡುವ ಕಾರ್ಯ ನಡೆದಾಗ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ. ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿದೆರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ ಎಂದರು.

ಎಪಿಎAಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರು ಬೆಳೆದ ಬೆಳೆಗಳನ್ನು ಎಲ್ಲಾ ಕಡೆ ಮಾರಾಟ ಮಾಡುವ ಅವಕಾಶವಿತ್ತು, ಆದರೆ ಕಾಂಗ್ರೆಸ್ ಸರಕಾರ ಅದನ್ನು ತಿದ್ದುಪಡಿ ಮಡುವ ಮೂಲಕ ರೈತರಿಗೆ ಅನ್ಯಾಯವೆಸಗಿದೆ.ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದ ಸಾರ್ವಕರ್, ಹಾಗೂ ಹೆಗಡೆವಾರ್ ಅವರ ವಿಷಯಗಳನ್ನು ತೆಗೆದುಹಾಕುವ ಮೂಲಕ ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ್ಯ ಅರಳ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ,ಚಿದಾನಂದ ರೈ ಕಕ್ಯಪದವು, ಕಿಶೋರ್ ಪಲ್ಲಿಪಾಡಿ,ಮೋಹನ್ ಪಿಎಸ್.ಯಶೋಧರ ಕರ್ಬೆಟ್ಟು, ಆನಂದ ಶಂಭೂರು, ಸೀತರಾಮ ಪೂಜಾರಿ, ಶಿವಪ್ರಸಾದ್ ಶೆಟ್ಟಿ, ಚಂದ್ರಕಲಾ ಮತ್ತಿತರರು ಉಪಸ್ಥಿತರಿದ್ದರು.

