Share this news

ನವದೆಹಲಿ: ಐಸಿಸ್ ಉಗ್ರವಾದ, ಮತಾಂತರ, ಭಯೋತ್ಪಾದನೆ ಷಡ್ಯಂತ್ರ ಕುರಿತ ಕೇರಳ ಸ್ಟೋರಿ ಚಿತ್ರ ಪರ ವಿರೋಧಕ್ಕೆ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧ ಹೇರಿದ್ದರು.ಪಶ್ಚಿಮ ಬಂಗಾಳದಲ್ಲಿ ಈ ಚಿತ್ರ ದ್ವೇಷ ಹರಡಲಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂದು ನಿಷೇಧ ಹೇರಿತ್ತು.  ಇದರ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಚಿತ್ರತಂಡಕ್ಕೆ ಗೆಲುವು ಸಿಕ್ಕಿದೆ. ಜಸ್ಟೀಸ್ ಪಿಎಸ್ ನರಸಿಂಹ , ಜಸ್ಟೀಸ್ ಜೆಬಿ ಪರಿದಿವಾಲ ಅವರಿದ್ದ ಪೀಠ ಮಹತ್ವದ ಆದೇಶ ನೀಡಿದೆ. ಪಶ್ಚಮ ಬಂಗಾಳ ವಿಧಿಸಿದ ನಿಷೇಧಕ್ಕೆ ತಡೆ ಕೋರಿ, ಇದೀಗ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿರುವುದನ್ನು ಮತ್ತು ತಮಿಳುನಾಡಿನಲ್ಲಿ ಸಿನಿಮಾವನ್ನು ಪ್ರದರ್ಶಿಸದಂತೆ ಥಿಯೇಟರ್ ಮಾಲೀಕರು ತೆಗೆದುಕೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಇಂದಿನ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ನೀಡಿದೆ.
ಇದೆ ವೇಳೆ, 32 ಸಾವಿರ ಹಿಂದೂ ಮತ್ತು ಕ್ರಿಶ್ಚಿಯನ್ ಮಹಿಳೆಯರನ್ನು ಇಸ್ಲಾಂಗೆ ಮತಾಂತರಿಸಲಾಗಿದೆ ಎಂಬ ಆರೋಪದ ಕುರಿತಂತೆ ಮೇ 20ರ ಸಂಜೆ 5 ಗಂಟೆಯೊಳಗೆ ಚಲನಚಿತ್ರದಲ್ಲಿ ಹಕ್ಕುತ್ಯಾಗದ ಸೂಚನೆ ಹಾಕುವಂತೆ ನಿರ್ಮಾಪಕರಿಗೆ ನಿರ್ದೇಶನ ನೀಡಿದೆ. ಚಿತ್ರಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಪ್ರಮಾಣೀಕರಣವನ್ನು ಪ್ರಶ್ನಿಸುವ ಅರ್ಜಿಗಳನ್ನು ನಿರ್ಧರಿಸುವ ಮೊದಲು ಚಲನಚಿತ್ರವನ್ನು ವೀಕ್ಷಿಸಲು ಬಯಸುವುದಾಗಿ ನ್ಯಾಯಪೀಠ ಹೇಳಿದೆ. ಈ ಅರ್ಜಿಗಳ ವಿಚಾರಣೆಯು ಜುಲೈ ಎರಡನೇ ವಾರದಲ್ಲಿ ನಡೆಯಲಿದೆ ಎಂದೂ ತಿಳಿಸಿದೆ.

ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧದ ಬಗ್ಗೆ ಈ ಹಿಂದೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸರ್ಕಾರದಿಂದ ಪ್ರತಿಕ್ರಿಯೆ ಹೇಳಿತ್ತು. ಇದಕ್ಕೆ ತನ್ನ ಉತ್ತರ ಸಲ್ಲಿಸಿರುವ ತಮಿಳುನಾಡು, ರಾಜ್ಯದಲ್ಲಿ ಚಲನಚಿತ್ರದ ಮೇಲೆ ಯಾವುದೇ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಸಿನಿಮಾವನ್ನು ಪ್ರದರ್ಶಿಸದಂತೆ ಥಿಯೇಟರ್ ಮಾಲೀಕರು ತೆಗೆದುಕೊಂಡಿರುವ ನಿರ್ಧಾರವನ್ನು ಗಮನಿಸಿರುವ ನ್ಯಾಯಪೀಠ,ಸಿನಿಮಾ ಪ್ರೇಕ್ಷಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಅಲ್ಲದೇ, ವಿಚಾರಣೆಯ ಸಮಯದಲ್ಲಿ ಸಾರ್ವಜನಿಕ ಅಸಹಿಷ್ಣುತೆಯ ಮೇಲೆ ಶಾಸನಬದ್ಧ ನಿಬಂಧನೆಗಳನ್ನು ಬಳಸಲು ಆಗುವುದಿಲ್ಲ. ಸಿಬಿಎಫ್‌ಸಿ ಪ್ರಮಾಣಪತ್ರ ನೀಡಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಪೀಠ ಹೇಳಿದೆ. ಚಿತ್ರದ ನಿರ್ಮಾಪಕರ ಪರ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ ತಮ್ಮ ವಾದ ಮಂಡಿಸಿ ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡುವ ಕುರಿತು ರಾಜ್ಯಗಳು ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಟಿ ಅದಾ ಶರ್ಮಾ ನಟಿಸಿರುವ ‘ದಿ ಕೇರಳ ಸ್ಟೋರಿ’ ಮೇ 5ರಂದು ಬಿಡುಗಡೆಯಾಗಿದೆ. ಸುದಿಪ್ತೋ ಸೇನ್ ನಿರ್ದೇಶನದ ಈ ಚಲನಚಿತ್ರವು ಕೇರಳದಲ್ಲಿ ಮಹಿಳೆಯರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಗೊಳಿಸುವ ಮತ್ತು ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್)ಗೆ ಸೇರ್ಪಡೆಗೊಳಿಸುವ ಕುರಿತಾಗಿದೆ. ಈ ಕುರಿತಂತೆ ಪರ ವಿರೋಧ ಚರ್ಚೆಗಳು ಜೋರಾಗಿವೆ.
ಕೇರಳದ ಪೊನ್ನಾನಿಯಲ್ಲಿ ಪ್ರಮುಖವಾಗಿ ಹಿಂದೂ ಧರ್ಮದ ಯುವತಿಯರನ್ನೇ ಗುರಿಯಾಗಿಸಿ ಮತಾಂತರಗೊಳಿಸುವ ಘಟನೆ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು ಈ ಚಲನಚಿತ್ರದಲ್ಲಿ ಬರುವ ಸನ್ನಿವೇಶಕ್ಕೆ ಪುಷ್ಟಿ ನೀಡುವಂತಿದೆ ಎನ್ನಲಾಗುತ್ತಿದೆ

 

Leave a Reply

Your email address will not be published. Required fields are marked *