Share this news

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮ ಪೇರಡ್ಕದಲ್ಲಿ ರೂ.2 ಕೋಟಿ 20 ಲಕ್ಷ ಅನುದಾನದಲ್ಲಿ ಜಿಲ್ಲಾ ಮಟ್ಟದ ಸಭಾಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ.

ಈ ಸಮುದಾಯ ಭವನವು ಸ್ವರ್ಣ ನದಿಯ ತಟದಲ್ಲಿ ಇರುವುದರಿಂದ ತಡೆಗೋಡೆ ನಿರ್ಮಾಣದ ಅಗತ್ಯವಿದೆ. ಅದರ ಜೊತೆಗೆ ಕುಡಿಯುವ ನೀರು, ಆವರಣ ಗೋಡೆ ನಿರ್ಮಾಣ, ಇಂಟರ್ ಲಾಕ್ ಹಾಗೂ ಅತಿಥಿಗೃಹ ನಿರ್ಮಾಣಕ್ಕೆ ಈಗಾಗಲೇ 2 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಈ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಶೀಘ್ರವಾಗಿ ಅನುದಾನ ಮಂಜೂರುಗೊಳಿಸಬೇಕೆAದು ಬೆಂಗಳೂರಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಪಿ.ಎಸ್ ಕಾಂತರಾಜು ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಹಾಗೂ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *