Share this news

ಉಡುಪಿ : ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ .ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ಆಯೋಜಿಸಿದ್ದ ಸಿಲ್ವರ್ ಉಡುಪಿ ಬೀಚ್ ಫೆಸ್ಟಿವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ರಜತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, ಮುಂದಿನ ೨೫ ವರ್ಷಗಳ ಅಭಿವೃದ್ಧಿಗೆ ಜಿಲ್ಲೆಯು ಯೋಜನೆಯನ್ನು ಸಿದ್ಧಪಡಿಸಿದೆ. ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಿಯಾನ್ ಲೈಟಿಂಗ್, ಫ್ಲೈ ಬೋರ್ಡ್, ಐಲ್ಯಾಂಡ್ ಕ್ಲಿಪ್ ಡ್ರೈವ್, ವಿಹಾರ ನೌಕೆ ಸೇವೆ, ಸ್ಕೂಬಾ ಡ್ರೈವ್ ಆರಂಭವಾಗಬೇಕಿದೆ. ಓಪನ್ ಸೀ ವಾಟರ್ ಈಜು ಸ್ಪರ್ಧೆ, ಜನರಲ್ ತಿಮ್ಮಯ್ಯ ಅಕಾಡೆಮಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕಯಾಕಿಂಗ್, ಮಹಿಳಾ ಟ್ರಬಲ್ ಬಾಲ್, ಚಿತ್ರಕಲಾ ಶಿಬಿರ, ಪ್ರೇಕ್ಷಕರ ಸ್ಥಳಗಳ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಜಿ.ಪಂ.ಸಿಇಒ ಪ್ರಸನ್ನ ಎಚ್. ಎ.ಎಸ್. ಅಧಿಕಾರಿ ಯತೀಶ್ ಉಪಸ್ಥಿತರಿದ್ದರು.

ಬೀಚ್‌ನಲ್ಲಿ ಫ್ಲೈ ಬೋರ್ಡ್, ಚಿತ್ರಕಲಾ ಸ್ಪರ್ಧೆ, ಆಹಾರ ಮೇಳ, ಸಮುದ್ರ ಮಧ್ಯ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೋಟ್ ಆಕರ್ಷಕ ವಾಗಿತ್ತು. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *