ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಚವಾಣ್ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಕಾಂಗ್ರೆಸ್ ನಾಯಕ ಪಕ್ಷದ ಬಗ್ಗೆ ಅತೃಪ್ತರಾಗಿದ್ದರು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಅಶೋಕ್ ಚವಾಣ್ ಮುಂದಿನ ವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಉನ್ನತ ನಾಯಕರು ಕೂಡ ಕೇಸರಿ ಪಕ್ಷದ ಮುಂಬೈ ಪ್ರದೇಶ ಕಚೇರಿಗೆ ಆಗಮಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.




ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ





