Share this news

ಕಾರ್ಕಳ:ರಾಜ್ಯ ಸಾರಿಗೆ ನಿಗಮದ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಕಾಂಗ್ರೆಸ್ ಸರಕಾರ ಆರಂಭಿಸಿರುವ “ಶಕ್ತಿ” ಯೋಜನೆಗೆ ಕಾರ್ಕಳದಲ್ಲಿ ಮಹಿಳಾ ಕಾಂಗ್ರೆಸ್ ಘಟಕ ಸಂಭ್ರಮಾಚರಣೆ ನಡೆಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಡಾ| ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಪ್ರಯುಕ್ತ ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳದ ಬಂಡೀಮಠ ಬಸ್ಸು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೋಂದಿಗೆ ಸಿಹಿ ಹಂಚಿ ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಕಾರ್ಕಳ ನಗರ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಮಾಜಿ ಪುರಸಭಾಧ್ಯಕ್ಷೆಯರಾದ ಪ್ರತಿಮಾ, ರೆಹಮತ್ ಶೇಕ್, ಪುರಸಭಾ ಮಾಜಿ ಸದಸ್ಯರುಗಳಾದ ಶಾಂತಿ ಶೆಟ್ಟಿ, ಅನಿಸಾ ಕಾತುನ್, ಯಶೋದಾ ಶೆಟ್ಟಿ, ಶೋಭಾ, ಹರಿಣಿ, ಸೌಮ್ಯ,ಆಶಾ ಶೆಟ್ಟಿ,ಯಶೋದಾ, ಸುಜಾತಾ ಮುಂತಾದವರು ಭಾಗವಹಿಸಿದ್ದರು

Leave a Reply

Your email address will not be published. Required fields are marked *