ಬೆಂಗಳೂರು: ದೇಶದ್ರೋಹದ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪರೋಕ್ಷವಾಗಿ ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇದೀಗ ಇದೆ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು. ಈ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಇದೀಗ ಕೆಎಸ್ ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ದಾವಣಗೆರೆ ಪೊಲೀಸರಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ನೋಟಿಸ್ ಜಾರಿ ಮಾಡಿದ್ದು, ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಆಗಮಿಸಿ ನೋಟಿಸ್ ಜಾರಿ ಮಾಡಿದ್ದಾರೆ.ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ದೇಶದ ವಿಭಜನೆ ವಿಚಾರವಾಗ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಇದೇ ಸಮಯದಲ್ಲಿ ಅಂದರೆ ನಿನ್ನೆ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ಗುಡುಗಿದ್ದರು. ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದರು. ಸದ್ಯ ಇದೇ ವಿಚಾರವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ದಾವಣಗೆರೆ ಪೊಲೀಸರು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಿವಾಸಕ್ಕೆ ಆಗಮಿಸಿ, ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ