ಮೈಸೂರು : ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈಗಾಗಲೇ ಕಾಂಗ್ರೆಸ್ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದು, ರಾಮೇಗೌಡ (69) ವರ್ಷ ಮೃತ ವ್ಯಕ್ತಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ 128 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 67 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್ 22 ಸ್ಥಾನ ಹಾಗೂ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.
