Share this news

ಹುಬ್ಬಳ್ಳಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ  ಹುಬ್ಬಳ್ಳಿಯ  ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ.

ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಚಾರವಾಗಿ ಇದೀಗ ಅಶೋಕ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.

Leave a Reply

Your email address will not be published. Required fields are marked *