Share this news

ಬೆಂಗಳೂರು: ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ವಿಧಾನಸಭೆಯ ಕಲಾಪದ ನೇರ ಚಿತ್ರೀಕರಣಕ್ಕೆ ಮಾಧ್ಯಮಗಳಿಗೆ ನಿರ್ಬಂಧಿಸಿತ್ತು. ಈ ನಿರ್ಬಂಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಕೆಪಿಸಿಸಿ ವಕ್ತಾರ ನಟರಾಜ್ ಗೌಡ ಮನವಿ ಮಾಡಿದ್ದಾರೆ.

ಇಂದು ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮಾಧ್ಯಮಗಳ ಸ್ವತಂತ್ರವನ್ನು ಹತ್ತಿಕ್ಕುವ ಕೆಲಸ, ಮಾಧ್ಯಮಗಳ ಮೂಲಕ ಮಾಹಿತಿಯನ್ನು ಪಡೆಯುವ ಜನಸಾಮಾನ್ಯರ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರವು ಈ ನಿರ್ಬಂಧವನ್ನು ತಕ್ಷಣವೇ ಹಿಂಪಡೆದು ಮಾಧ್ಯಮಗಳ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸಬೇಕಾಗಿ ಮನವಿ ಮಾಡಿದ್ದಾರೆ.

ಈ ಮೊದಲು ಬಿಜೆಪಿ ನೇತೃತ್ವದ ಸರ್ಕಾರದ ವೇಳೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಕಲಾಪವನ್ನು ಮಾಧ್ಯಮಗಳಿಂದಲೇ ನೇರ ಚಿತ್ರೀಕರಣಕ್ಕೆ ನೀಡಲಾಗಿದ್ದ ಅವಕಾಶವನ್ನು ನಿರ್ಬಂಧಿಸಲಾಗಿತ್ತು. ಡಿಡಿ ಚಂದನದ ಮೂಲಕ ಚಿತ್ರೀಕರಿಸಿ, ಅಲ್ಲಿಂದ ಔಟ್ ಪುಟ್ ವೀಡಿಯೋ ಆಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡುವುದಕ್ಕೆ ಅವಕಾಶ ನೀಡಲಾಗಿತ್ತು.

Leave a Reply

Your email address will not be published. Required fields are marked *