ನವದೆಹಲಿ: ಮೋದಿ ಸರ್ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಗೆ ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
2019 ರ ಪ್ರಕರಣದಲ್ಲಿ ರಾಹುಲ್ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿರುವ ಪ್ರಕರಣದಲ್ಲಿ ಅವರ ದೋಷಾರೋಪಣೆಗೆ ತಡೆ ನೀಡುವಂತೆ ಮಾಡಿದ ಮನವಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಮೋದಿ ಸರ್ನೇಮ್ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆಯಾಜ್ಞೆ ಕೋರಿ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಗುಜರಾತ್ ಹೈಕೋರ್ಟ್ ನಡೆಸಿದೆ.