Share this news

ಬೆಂಗಳೂರು : 2024ರ ಹಣಕಾಸು ವರ್ಷದ ಅಂತ್ಯ (ಮಾರ್ಚ್ ಅಂತ್ಯಕ್ಕೆ)ದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಸಕ್ತ ಹಣಕಾಸು ವರ್ಷದ ಅಂತ್ಯದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ. ಇದಕ್ಕೆ 2008ರಲ್ಲಿಯೇ ಯೋಜನೆ ಸಿದ್ಧಪಡಿಸಲಾಗಿತ್ತು. ಇಲ್ಲಿಯವರೆಗೆ ಕೇವಲ ಎರಡು ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. 15 ವರ್ಷಗಳಿಂದ ಪೂರ್ಣ ಪ್ರಮಾಣದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ.

ಗ್ರಾಮ ನ್ಯಾಯಾಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದೆ. ಗ್ರಾಮೀಣ ಭಾಗದ ಪ್ರಕರಣಗಳ ತ್ವರಿತ ವಿಲೇವಾರಿಗೆ ಈ ಕ್ರಮ ನೆರವಾಗಲಿದೆ ಎಂದು ಹೇಳಿದರು.

ಕಾನೂನು ಅನುಷ್ಠಾನ ವಿಳಂಬವಾದರೆ ವಕೀಲರು ಹಾಗೂ ಪತ್ರಕರ್ತರು ಸರ್ಕಾರವನ್ನು ಪ್ರಶ್ನಿಸಿ ಎಚ್ಚರಿಸುವ ಕೆಲಸ ಮಾಡಬೇಕು. ನ್ಯಾಯಾಧೀಶರು ಕಕ್ಷಿದಾರರ ಗೌರವ ಕಾಪಾಡುವ ಬಗ್ಗೆ ಗಮನ ಹರಿಸಬೇಕು ಎಂದರು.

Leave a Reply

Your email address will not be published. Required fields are marked *