Share this news

ಶಿವಮೊಗ್ಗ: ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್​ 1 ರಿಂದ ಸರ್ಕಾರಿ  ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ   ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. 

 

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಜೆಟ್​ನಲ್ಲಿ ಮುಖ್ಯಮಂತ್ರಿ  ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರವಾಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದರು.

 

 

ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ.  ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

Leave a Reply

Your email address will not be published. Required fields are marked *