ಕಾರ್ಕಳ : ಕಾರ್ಕಳ ತಾಲೂಕು ಮಾಳ ಮಂಜಲ್ತಾರ್ ಎಂಬಲ್ಲಿ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮಂಜಲ್ತಾರ್ ನಿವಾಸಿ ಸುಂದರ (47 ವರ್ಷ) ಅವರು ಕಳೆದ ಎರಡೂವರೆ ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಂದಿನಂತೆ ಇಂದು (ಸೋಮವಾರ) ಬೆಳಿಗ್ಗೆ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಏಕಾಏಕಿ ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸುಂದರ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ .
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ