ಕಾರ್ಕಳ : ಪ್ರಕೃತಿ ಸಹಜ ಸೌಂದರ್ಯ ಹೊಂದಿರುವ ಮಾಳ ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಅದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಹೇಳಿದರು.
ಅವರು ಜಿಲ್ಲಾಡಳಿತ ವತಿಯಿಂದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮದಲ್ಲಿನ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಯಕ್ಷ ಸಾಧಕ ಪ್ರಭಾಕರ ಜೋಷಿ, ಖ್ಯಾತ ವಿನ್ಯಾಸಕಾರ ಪುರುಷೋತ್ತಮ ಅಡ್ವೆ ಸೇರಿದಂತೆ ಮಾಳ ಗ್ರಾಮದ ಸಾಧಕರನ್ನು ಜಿಲ್ಲಾಧಿಕಾರಿ ನೆನಪಿಸಿಕೊಂಡರು.
ಮಾಳ ಗ್ರಾಪಂ ಅಧ್ಯಕ್ಷೆ ರಕ್ಷಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಂಚಾಯತ್‌ನಲ್ಲಿ ಖಾಲಿ ಇರುವ ಕಾರ್ಯದರ್ಶಿ ಹಾಗೂ ಇತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ, ವಿಭಾಗಾಧಿಕಾರಿ ರಶ್ಮಿ, ಕುದುರೆಮುಖ ಎ ಸಿ ಎಫ್ ಲೇಖರಾಜ್ ಮೀನಾ, ಆರೋಗ್ಯ ಇಲಾಖೆ ಡಿ ಎಚ್ ಒ ಡಾ. ಚಂದ್ರಕಾAತ್ ಸೂಡ ಉಪಸ್ಥಿತರಿದ್ದರು.
ಕಾರ್ಕಳ ತಹಶಿಲ್ದಾರ್ ಅನಂತ ಶಂಕರ್ ಸ್ವಾಗತಿಸಿ, ತಾರ ಹಾಗೂ ಶಶಿಕಲಾ ಪ್ರಾರ್ಥಿಸಿದರು
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಯ ನೆನಪಿಗಾಗಿ ಶಾಲಾ ವಠಾರದಲ್ಲಿ ಗಿಡ ನೆಟ್ಟರು. ಮಲೆಕುಡಿಯ ಸಮುದಾಯ ಭವನ, ಎಸ್ ಸಿ ,ಎಸ್ ಟಿ, ಕಾಲನಿ ಹಾಗೂ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದರು.