ಕಾರ್ಕಳ : ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಮಾ.13ರಂದು ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ.
ಈ ಸಭೆಗೆ ಅಸ್ಸಾಂ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಸಹಿತ ರಾಜ್ಯದ ಹಲವು ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಹೆಬ್ರಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.