Share this news

ಕಾರ್ಕಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಧ್ವನಿ ಕಾರ್ಯಕ್ರಮದ ಅಂಗವಾಗಿ ಕರಾವಳಿ ಧ್ವನಿ ಯಾತ್ರೆ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್ 17 ಶುಕ್ರವಾರದಂದು 3 ಜಿಲ್ಲಾ ಪಂಚಾಯತ್ ಹಾಗೂ 1 ನಗರ ಪ್ರದೇಶದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಗೆ ಕೆದಿಂಜೆ ಪೇಟೆ, 12 ಗಂಟೆಗೆ ಬಜಗೋಳಿಯ ಹೋಟೆಲ್ ಚಿರಾಗ್, ಮಧ್ಯಾಹ್ನ 3 ಗಂಟೆಗೆ ಕಾರ್ಕಳ ಬಂಡಿಮಠ ಬಸ್ ನಿಲ್ದಾಣ ಹಾಗೂ ಸಾಯಂಕಾಲ 5 ಗಂಟೆಗೆ ಹೆಬ್ರಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕರಾವಳಿ ಧ್ವನಿ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ| ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವ ಆರ್.ಬಿ. ದೇಶ್ ಪಾಂಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ರಾಜ್ಯ ಹಿಂದುಳಿದ ವರ್ಗದ ಅಧ್ಯಕ್ಷ ಮಧು ಬಂಗಾರಪ್ಪ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹಾಗೂ ಪಕ್ಷದ ಇತರ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *