ಬೆಂಗಳೂರು : ಸರ್ಕಾರಿ ನೌಕರರ ಮುಷ್ಕರ ಅಂತ್ಯವಾದ ಬೆನ್ನಲ್ಲೇ ಇದೀಗ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ . ಮಾರ್ಚ್ 24 ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಮಾರ್ಚ್ 24 ರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಬಿಎಂಟಿಸಿ, ಕೆಎಸ್ ಆರ್ ಟಿಸಿ, ಕೆಕೆ ಆರ್ ಟಿಸಿ , ಎನ್ ಡಬ್ಲ್ಯೂ ಕೆ ಆರ್ ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
2016 ರಿಂದ ನಮ್ಮ ವೇತನ ಹೆಚ್ಚಳವಾಗಿಲ್ಲ, ಸರ್ಕಾರದ ಗಮನ ಸೆಳೆಯಲು ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ಅಸಮಾಧಾನ ಹೊರಹಾಕಿದರು. 2021 ರಲ್ಲಿ ಪ್ರತಿಭಟನೆ ನಡೆಸಿದ್ದೆವು, ಆದರೆ ಸಾರಿಗೆ ಸಚಿವರು ಲಿಖಿತ ಭರವಸೆ ನೀಡಿದ್ದರು. ಆದರೆ ಆ ಭರವಸೆ ಭರವಸೆಯಾಗಿಯೇ ಉಳಿದಿದೆ. ಸಾರಿಗೆ ನೌಕರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.