ತುಮಕೂರು: ರಾಜ್ಯದಲ್ಲಿನ ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ಮಾರ್ಚ್ 9ರಂದು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಮಾರ್ಚ್ 9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ರಾಜ್ಯಾಧ್ಯಂತ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಕರ್ನಾಟಕ ಬಂದ್ ನಡೆಸಲಾಗುತ್ತದೆ. ಅಂದು ಎಲ್ಲಾ ವ್ಯಾಪಾರಿಗಳು ಬಂದ್ ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.
ಮಾರ್ಚ್ 9ರಂದು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು, ಕಾನೂನು ಕೈಗೆತ್ತಿಕೊಳ್ಳುವಂತ ಕೆಲಸ ಮಾಡಬಾರದು. ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗಾಗಿ ಎಲ್ಲರ ಸಹಕಾರ ಬೇಕು ಎಂದರು.
ಈ ಬಗ್ಗೆ ರಾಷ್ಟ್ರ ನಾಯಕರ ಜೊತೆಗೂ ಚರ್ಚಿಸಲಾಗಿದೆ. ರಾಜ್ಯಕ್ಕೆ ಬಿಜೆಪಿ ಅಗೌರವ ತರುವಂತ ಕೆಲಸ ಮಾಡುತ್ತಿದೆ. ಜನರಿಗೆ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ಸಂಘಟನೆಗಳು, ಕಾರ್ಯಕರ್ತರು ಬೆಂಬಲಿಸಿ, ಶಾಂತಿಯುತವಾಗಿ ಬಂದ್ ನಡೆಸುವಂತೆ ಮನವಿ ಮಾಡಿದರು.