ಕಾರ್ಕಳ:ತೆಂಗಿನ ಕಾಯಿ ಕೀಳಲು ಮರ ಏರಿದ ಕಾರ್ಮಿಕರೊಬ್ಬರು ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಅಶೋಕ (53) ಎಂಬವರು ಮೃತಪಟ್ಟ ದುರ್ದೈವಿ. ಅವರು ಶನಿವಾರ ಬೆಳಗ್ಗೆ ಮಿಯ್ಯಾರು ಗ್ರಾಮದ ಬೆರ್ಮಲ್ಲಿ ಎಂಬಲ್ಲಿ ಸಂದೇಶ್ ಎಂಬುವರ ಮನೆಗೆ ತೆಂಗಿನಕಾಯಿ ಕೀಳಲು ಹೋಗಿದ್ದು, ತೆಂಗಿನಕಾಯಿ ಕೀಳುತ್ತಿರುವಾಗ ಬೆಳಗ್ಗೆ 09:30 ರ ಸುಮಾರಿಗೆ ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅಶೋಕ್ ಅವರನ್ನು ಚಿಕಿತ್ಸೆಗೆ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಯ ವೈದ್ಯಾಧಿಕಾರಿಯವರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅಲ್ಲಿಂದ ಮಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಅಶೋಕ್ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ