ಬೆಂಗಳೂರು: ಕಳೆದ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಶುಕ್ರವಾರ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ಇನ್ ಪುಟ್ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತೀ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿ, ಅದಕ್ಕಾಗಿ ರಾಜ್ಯ ಸರ್ಕಾರವು 105 ಕೋಟಿಯನ್ನು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿದೆ.
ಪ್ರತಿ ರೈತರಿಗೆ ಗರಿಷ್ಠ 2000ರವರೆಗೆ ರೈತರಿಗೆ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ