Share this news

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಬರುವ  ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬರುತ್ತಿದ್ದ ಪಡಿತರ ಸ್ಥಗಿತವಾಗಿರುವದರಿಂದ ಪಡಿತರ ವಿತರಣೆ ಪ್ರಮಾಣ ಇಳಿಕೆಯಾಗಿದೆ.ಪುನಃ ಈ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿಯವರೊAದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರು ತಮ್ಮ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರೆ ತಕ್ಷಣ ಭೂ ಪರಿವರ್ತನೆ ಮಾಡಿಕೊಡಲು ಸುಧಾರಣೆ ಕಾಯ್ದೆ ತರಲಾಗಿದೆ.ಯುವಕರು,ವಿದ್ಯಾವಂತರು,ಐಟಿಬಿಟಿಗಳಲ್ಲಿ ತೊಡಗಿಸಿಕೊಂಡವರು ರಾಜ್ಯದ ಯಾವುದೇ ಭಾಗದಲ್ಲಿಯಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ.ಕೃಷಿಯಲ್ಲಿ ಆಧುನಿಕತೆ ತರುವ ಉದ್ದೇಶದಿಂದ ಹಿಂದೆ ಇದ್ದ ಕಾಯ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದರು.

ತಾAಡಾ,ಮುಜುರೆ,ಹಟ್ಟಿ,ಕ್ಯಾAಪ್‌ಗಳಿಗೆ ಕಂದಾಯ ಹಕ್ಕುಗಳನ್ನು ನೀಡಿ ಗ್ರಾಮಗಳನ್ನಾಗಿ ಪರಿವರ್ತಿಸಿ ಬಡಜನರಿಗೆ ನ್ಯಾಯ ಒದಗಿಸಲಾಗುತ್ತಿದೆ.ಎಸ್.ಸಿ.ಹಾಗೂ ಎಸ್.ಟಿ.ಮೀಸಲು ಹೆಚ್ಚಳಕ್ಕೆ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ಈಗಾಗಲೇ ಸಾಗುವಳಿ ಚೀಟಿ ಹೊಂದಿರುವ ಜನರ ಜಮೀನುಗಳನ್ನು ಪಡೆಯದಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ ಸಚಿವರು ಬದಲಾಗಬಹುದು ಆದರೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಇರುತ್ತಾರೆ. ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂಬ ಮಹತ್ವಾಕಾಂಕ್ಷೆಯಿAದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಶೀರ್ಷಿಕೆ ನೀಡಲಾಗಿದೆ. ಈ ಕಾರ್ಯಕ್ರಮ ಇರದಿದ್ದರೆ ಯಾವುದೇ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಬಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿರಲಿಲ್ಲ.

ರಾಜ್ಯದ ಎಲ್ಲಾ ಕಡೆ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ ಅನೇಕ ಸೌಕರ್ಯಗಳು ಬಡ,ಅರ್ಹ ಫಲಾನುಭವಿಗಳಿಗೆ ಅವರಿರುವ ಕಡೆಗಳಲ್ಲಿಯೇ ದೊರೆಯುತ್ತಿವೆ.ಇದುವರೆಗೆ ಸುಮಾರು 15 ಗ್ರಾಮವಾಸ್ತವ್ಯ ಕೈಗೊಳ್ಳಲಾಗಿದ್ದು ಸುಮಾರು 1 ಲಕ್ಷ 18 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

Leave a Reply

Your email address will not be published. Required fields are marked *