Share this news

ಬೆಂಗಳೂರು: ಇಂದು 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಶಾಸಕರ ಶಿಫಾರಸ್ಸು ತಂದರೆ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ. ದುಡ್ಡು ಕೊಟ್ಟಿರುವವರು ಸಾಕ್ಷಿ ಕೊಡುತ್ತರಾ, ದುಡ್ಡು ಕೊಟ್ಟವರಿಗೆ ಕೆಲಸ ಆಗಬೇಕು ಹಾಗಾಗಿ ಯಾರು ಕೊಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷ ಬಗ್ಗೆ ಚರ್ಚಿಸ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.


ಈ ಸರ್ಕಾರ ಐಸಿಯು ಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದರು.

ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ನಿನ್ನೆ (ಜು.02) ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಬರುತ್ತಾರೆ ಗೊತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಲೇವಡಿಯಾಡಿದರು.

Leave a Reply

Your email address will not be published. Required fields are marked *