ಕಾರ್ಕಳ:ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ವೇಗವಾಗಿ ಸಾಗುತಿದ್ದ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಭಕ್ರೆಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದ ಅಪಘಾತಕ್ಕೆ ಚಿರತೆ ಬಲಿಯಾಗಿದೆ.
ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆ ಮರಳಿ ಕಾಡಿನತ್ತ ಹೋಗಲು ರಸ್ತೆ ದಾಟಲು ಮುಂದಾದಾಗ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಸಿದ್ದು,ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಶವವನ್ನು ಪಂಚನಾಮೆ ನಡೆಸಿದ ಬಳಿಕ ಇಲಾಖಾ ನಿಯಮದಂತೆ ಅರಣ್ಯ ಇಲಾಖೆಯ ಆವರಣದಲ್ಲಿ ಅಂತ್ಯಸಂಸ್ಕಾರ ನಡೆಸಿದರು
ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.