ಹೆಬ್ರಿ :ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮುದ್ರಾಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋ ಬಾಲ್ ಪಂದ್ಯಾಟ ಇಂದು (ಸೆ.1) ಮುದ್ರಾಡಿ ಶಾಲಾ ವಠಾರದಲ್ಲಿ ನಡೆಯಿತು .
ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಂದ್ಯಾಟದಲ್ಲಿ ಸೋಲು ಗೆಲವು ಸಹಜ. ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಆಟದಲ್ಲಿ ಭಾಗವಹಿಸಬೇಕು ಎಂದರು. ಪಂದ್ಯಾಟವನ್ನು ಮುದ್ರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಂಜುನಾಥ ಹೆಗ್ಡೆ ಅಂಕಣದಲ್ಲಿ ರಿಬ್ಬನ್ ಕಟ್ ಮಾಡುವುದರ ಮೂಲಕ ಉದ್ಘಾಟಿಸಿದರು.
ಕಾರ್ಕಳ ಕ್ಷೇತ್ರ ಶಿಕ್ಷಣ ಅಧಿಕಾರಿಯವರ ಕಛೇರಿಯ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ರವಿಚಂದ್ರ ಕಾರಂತ್ ಪಂದ್ಯಾಟದ ನೇತೃತ್ವ ವಹಿಸಿ ಮಾತನಾಡಿ, ಇಲ್ಲಿ ಪ್ರಥಮ ಸ್ಥಾನದಲ್ಲಿ ವಿಜೇತರಾದ ತಂಡವು ಬೈಂದೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟಕ್ಕೆ ಅರ್ಹತೆ ಪಡೆಯುತ್ತಾರೆ. ಅಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಆಡಿ ಕಾರ್ಕಳಕ್ಕೆ ಕೀರ್ತಿ ತನ್ನಿ ಎಂದು ಹೇಳಿದರು.
ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಶುಭಧರ ಶೆಟ್ಟಿ ಅಧ್ಯಕ್ಷತೆ ವಹಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು.
ಮುದ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯೆರಾದ ಶಾಂತ ದಿನೇಶ್ ಪೂಜಾರಿ, ಸನತ್ ಕುಮಾರ್, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆ ಅಧ್ಯಕ್ಷ ಹರೀಶ್ ಪೂಜಾರಿ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಅಣ್ಣಪ್ಪ, ಸಿ. ಆರ್. ಪಿ. ಕೃಷ್ಣರಾಜ್ ಭಟ್, ಶಿಕ್ಷಣ ಸಂಯೋಜಕ ಪ್ರಕಾಶ್ ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರAಗ ಆಚಾರ್ಯ, ಉಡುಪಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಆನಂದ ಪೂಜಾರಿ, ಕ. ರಾ. ಶಾಲಾ. ಶಿ. ಸಂಘದ ಸಂಘಟನಾ ಕಾರ್ಯದರ್ಶಿ ರಂಜಿತಾ, ರಜತ್ ಶೆಟ್ಟಿ, ವಾರಿಜ ಶೆಡ್ತಿ ಪುಷ್ಯರಾಗ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂದ್ಯಾಟಕ್ಕೆ ಧನ ಸಹಾಯ ನೀಡಿದ ಮಹನೀಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮುದ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ಪಂದ್ಯಾಟಕ್ಕೆ ನೀಡಿದ ರೂ. 10000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಭಂಡಾರಿ ಸ್ವಾಗತಿಸಿ, ಶಿಕ್ಷಕ ಸತೀಶ್ ಬೆಳಂಜೆ ನಿರೂಪಿಸಿದರು. ಶಿಕ್ಷಕಿ ಸುಮಲತಾ ವಂದಿಸಿದರು.