ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಜರವತ್ತು ನಿವಾಸಿ ರಾಜೇಶ (34 ವರ್ಷ) ಆತ್ಮಹತ್ಯೆ ಮಾಡಿಕೊಂಡವರು.
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಾಜೇಶ್ ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ರಾತ್ರಿ 8 ಗಂಟೆಯ ವೇಳೆಗೆ ತಮ್ಮ ಮನೆಯ ಅಂಗಳದಲ್ಲಿರುವ ಗೊಬ್ಬರ ಮರಕ್ಕೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.