ಹೆಬ್ರಿ:ವರಂಗ ಗ್ರಾಮದ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿನ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಮರಳು ಸಂಗ್ರಹಿಸುತ್ತಿದ್ದ ವೃಷಭ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಅಲ್ಲದೇ ಸಂಗ್ರಹಿಸಲಾಗಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳೀಯ ಕೆಲವು ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಕ್ರಮ ಮರಳುಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದು ಈ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯ ಕಟ್ಟುನಿಟ್ಟಿನ ಆದೇಶದ ಮೇರೆಗೆ ಪೊಲೀಸರು ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಪರವಾನಿಗೆ ಇಲ್ಲದೇ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಪರವಾನಗಿ ಇಲ್ಲದೇ ಕಲ್ಲು,ಮರಳು ಸಾಗಾಟ ಮಾಡುವ ಲಾರಿಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ ಕೇಸ್ ದಾಖಲಿಸಲಾಗುತ್ತಿದೆ.
