ಹೆಬ್ರಿ : ಈ ಬಾರಿಯ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಶೇ. .83.33 ಫಲಿತಾಂಶ ಲಭಿಸಿದೆ.
ಅಮೂಲ್ಯ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದರೆ, ನವ್ಯ 603 ಅಂಕ ಹಾಗೂ ಆಯಿಷ ಅಝ್ಮೀನಾ 594 ಅಂಕ ಪಡೆದಿದ್ದಾರೆ.

3 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ ಹಾಗೂ 6 ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಪಡೆದಿರುತ್ತಾರೆ. ಇಂಗ್ಲಿಷ್ ಮಾಧ್ಯಮದಲ್ಲಿ 55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 54 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕನ್ನಡ ಮಾಧ್ಯಮದ 35 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

