ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಹಿಂದಿನಿಂದ ಬಂದ ಯುವಕನೋರ್ವ ಏಕಾಎಕಿ ದೊಣ್ಣೆಯಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಹೆಬ್ರಿ ತಾಲೂಕಿನ ಮುನಿಯಾಲು ಎಂಬಲ್ಲಿ ಗುರುವಾರ ನಡೆದಿದೆ.
ದಿನೇಶ್ ಎಂಬವರು ಗುರುವಾರ ಸಂಜೆ ಸುಮಾರು 5.15 ರವೇಳೆಗೆ ಮುನಿಯಾಲು ಪೇಟೆಯಲ್ಲಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಸಂದರ್ಭದಲ್ಲಿ ಮುಟ್ಲುಪಾಡಿ ನಿವಾಸಿ ಕಿರಣ್ ನಾಯ್ಕ್ ಎಂಬಾತ ಏಕಾಎಕಿ ಹಿಂದಿನಿಂದ ಬಂದು ದೊಣ್ಣೆಯಿಂದ ತಲೆಗೆ ಹೊಡೆದು ಹಲ್ಲೆಗೈದಿದ್ದಾನೆ. ಹಲ್ಲೆಯಿಂದ ದಿನೇಶ್ ತಲೆಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕಿರಣ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.