ಮುಲ್ಕಿ: ರಜತ ಸಂಭ್ರಮ ಆಚರಿಸುತ್ತಿರುವ ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸಾರ್ವಜನಿಕರಿಗೆ ಮುದ್ದುಕೃಷ್ಣ ಸ್ಪರ್ಧೆಯನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿದರು.
ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡಿ, ಕಳೆದ 25 ವರ್ಷಗಳಿಂದ ನಂದಿ ಫ್ರೆಂಡ್ಸ್ ವತಿಯಿಂದ ಯುವಕರ ಸಹಭಾಗಿತ್ವದಲ್ಲಿ ಮಕ್ಕಳಿಗೆ ಧಾರ್ಮಿಕ ಚಿಂತನೆ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸಂಸ್ಥೆಯ ವತಿಯಿಂದ ಮತ್ತಷ್ಟು ಸಾಮಾಜಿಕ ಚಟುವಟಿಕೆಗಳು ನಡೆಯಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪುನರೂರು ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಯುಗ ಪುರುಷ ಸಂಪಾದಕ ಭುವನಾಭಿರಾಮ ಉಡುಪ, ಉದ್ಯಮಿ ದಿವಾಕರ ಕರ್ಕೇರ ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ತ್ಯಾಗರಾಜ ಆಚಾರ್ಯ,ಪುನರೂರು ವಿಪ್ರ ಸಂಪದದ ಅಧ್ಯಕ್ಷ ಸುಧಾಕರ್ ರಾವ್, ರವಿ ಶೆಟ್ಟಿ ಪುನರೂರು ಗುತ್ತು, ಬಿಜೆಪಿ ನಾಯಕಿ, ಕಸ್ತೂರಿ ಪಂಜ,ಎಸ್. ಕೋಡಿ ಅಧ್ಯಕ್ಷ ಮಿತ್ರ ಬಳಗ ಪ್ರದೀಪ್ ಶೆಟ್ಟಿ, ಅಂಗಾರಗುಡ್ಡೆ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ದಿನೇಶ್ ಕೋಟ್ಯಾನ್, ಕೆರೆ ಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸಂದೀಪ್ ಕುಮಾರ್,ಪುನರೂರು ನಂದಿ ಫ್ರೆಂಡ್ಸ್ ಅಧ್ಯಕ್ಷ ಪಟೇಲ್ ವಿಶ್ವನಾಥ ರಾವ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಗೋಪಿನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು.
ದುರ್ಗಾ ಪ್ರಸಾದ್ ಕಟೀಲು ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.