ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಉದ್ಯೋಗಿ ತಾನು ವಾಸವಿದ್ದ ಹಾಸ್ಟೆಲ್ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಗಲಕೋಟೆ ಮೂಲದ ಹನುಮಂತಪ್ಪ(24) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಸೋಮವಾರ ರಾತ್ರಿ ಹಾಸ್ಟೆಲ್ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಹನುಮಂತಪ್ಪ ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಪದವಿ ಪಡೆದು ಕಳೆದ ಜನವರಿ ತಿಂಗಳಿನಲ್ಲಿ ಇದೇ ಸಂಸ್ಥೆಯಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿ ಸೇರ್ಪಡೆಯಾಗಿದ್ದರು. ಹನುಮಂತಪ್ಪ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತನಿಖೆಗೆ ಮುಂದಾಗಿದ್ದಾರೆ