Share this news

ಮೂಡುಬಿದಿರೆ: ಜೀವನದಲ್ಲಿ ಅವಕಾಶಗಳು ತುಂಬಾ ಇದೆ. ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗೆಲುವು ಸಾಧಿಸಬೇಕು. ಯಾವುದೇ ಆಟದಲ್ಲಿ ಸೋಲು ಗೆಲುವುಗಳು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ತಾಳ್ಮೆಯಿಂದ ವರ್ತಿಸಿ ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹೇಳಿದರು.

 

ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ತಾಲೂಕು ಮತ್ತು ಎಕ್ಸಲೆಂಟ್ ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಶಟಲ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾಟಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ನವೀನ್ ಪುತ್ರನ್ ಮಾತನಾಡಿ, ಎಕ್ಸಲೆಂಟ್ ಭೂಮಿಯಲ್ಲಿ ಧನಾತ್ಮಕ ಚಿಂತನೆಗಳಿವೆ ಆ ರೀತಿಯ ಧನಾತ್ಮಕ ಮನೋಭಾವ ನಿಮ್ಮ ಆಟದಲ್ಲಿಯೂ ಇರಲಿ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ ಸೋಲು ಗೆಲುವು ಆಟದ ಒಂದು ಭಾಗ. ಜೀವನ ತುಂಬಾ ದೊಡ್ಡದು ಅಲ್ಲಿ ಸಿಗುವ ಅನುಭವಗಳನ್ನು ಸಮನಾಗಿ ಸ್ವೀಕರಿಸಿ ಎಂದು ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ, ಆಟವನ್ನು ಮನೋರಂಜನೆಯಿAದ ಆಡಿ ನಿಮ್ಮ ಜ್ಞಾನ, ಕೌಶಲ್ಯ ಎಲ್ಲವೂ ನಿಮ್ಮ ಗೆಲುವಿಗೆ ಸಾಕ್ಷಿಯಾಗಲಿ. ಆಟವನ್ನು ಒಂದು ಸವಾಲಾಗಿ ಸ್ವೀಕರಿಸಿ ರಾಷ್ಟಿçÃಯ, ಅಂತರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುವವರು ನೀವಾಗಿ ಎಂದು ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್ ಮೂಡುಬಿದಿರೆ, ತಾಲೂಕಿನ ಎಲ್ಲಾ ಶಿಕ್ಷಕ ಸಂಘಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ನಿತ್ಯಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಅಧ್ಯಾಪಕ ರೇಣುಕಾಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *