ಮೂಡಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ಮೂಡುಬಿದಿರೆ, ಕೃಷಿಋಷಿ ಡಾ. ಎಲ್. ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳ ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳವು ಜುಲೈ 14 15 ಮತ್ತು 16ರಂದು ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಮೂಡುಬಿದಿರೆ ವಿದ್ಯಾ ಗಿರಿಯ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ಈ ಮೇಳಕ್ಕೆ ಪ್ರವೇಶ ಉಚಿತವಾಗಿದ್ದು ಮಕ್ಕಳು ಮಹಿಳೆಯರು ಹಿರಿಯರೆಲ್ಲರೂ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಮೂಡಬಿದಿರೆ ಹೊಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿಯ ಸಂಚಾಲಕರಾದ ಡಾಕ್ಟರ್ ಎಂ ಮೋಹನ್ ಆಳ್ವ ತಿಳಿಸಿದ್ದಾರೆ