ಮೂಡಬಿದಿರೆ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸoಬಾದಲ್ಲಿ ನಡೆದ ಪ್ರೇರಣಾ ಉತ್ಸವದಲ್ಲಿ ಮೂಡುಬಿದಿರೆ ಅರಮನೆ ಬಾಗಿಲು ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದ ಸಂಸ್ಥಾಪಕ ಪ್ರಕಾಶ್ ಜೆ ಶೆಟ್ಟಿಗಾರ್ ಅವರಿಗೆ ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ‘ಪ್ರೇರಣಾ ಪುರಸ್ಕಾರ್- 2023’ ಸನ್ಮಾನಿಸಿ ಗೌರವಿಸಲಾಯಿತು.
ಪ್ರಕಾಶ್ ಶೆಟ್ಟಿಗಾರ್ ವಿಶೇಷಚೇತನನಾಗಿದ್ದರೂ ಕಳೆದ 7 ವರ್ಷಗಳಿಂದ ವಿಶೇಷ ಚೇತನರಿಗಾಗಿ ಶ್ರಮಿಸುತ್ತಿದ್ದು,ಇವರ ಸಮಾಜಮುಖಿ ಸೇವಾ ಕಾರ್ಯವನ್ನು ಗುರುತಿಸಿ ಸಂಸ್ಥೆಯು 51,000 ರೂ. ನಗದಿನೊಂದಿಗೆ ಸನ್ಮಾನ ಪತ್ರ ಹಾಗೂ ನೆನಪಿನ ಕಾಣಿಕೆಯನ್ನೊಳಗೊಂಡ ಪ್ರೇರಣಾ ಪುರಸ್ಕಾರ್ -2023 ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ನಿಪ್ಪಾಣಿ ಕ್ಷೇತ್ರದ ಶಾಸಕಿ, ಮಾಜಿ ಸಚಿವೆ, ಸ್ಪೆಷಲ್ ಒಲಂಪಿಕ್ಸ್ ಭಾರತ್ ಕರ್ನಾಟಕ ಇದರ ರಾಜ್ಯಾಧ್ಯಕ್ಷೆ ಶಶಿಕಲಾ ಜೊಲ್ಲೆ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ