ಮೂಡಬಿದಿರೆ :ಅಲಂಗಾರು ಬಳಿಯ ಜಿ.ಕೆ ಗಾರ್ಡನ್ ಪಕ್ಕದ ಮಾರ್ನಾಡು ಗರಡಿ ಸಮೀಪ ಸೋಮವಾರ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ದುಷ್ಕರ್ಮಿಗಳು ಮಾರುತಿ ರಿಟ್ಜ್ ಕಾರಿನಲ್ಲಿ ದನಗಳನ್ನು ತುಂಬಿಸಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ದನ ಸಾಗಾಟದ ಕಾರನ್ನು ತಡೆದಾಗ ಆರೋಪಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಬಳಿಕ ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಆಗಮಿಸಿ ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ತುಂಬಿಸಿದ್ದ ಮೂರು ಕರುಗಳನ್ನು ಪತ್ತೆಯಾಗಿವೆ. ಬಳಿಕ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ
ಕಾರಿನೊಳಗೆ ನಕಲಿ ನಂಬರ್ ಪ್ಲೇಟ್ ಪತ್ತೆ:
ದನಸಾಗಾಟದಲ್ಲಿ ಅಪಘಾತಕ್ಕೀಡಾದ ಕಾರಿನೊಳಗೆ ಹಲವಾರು ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದ್ದು, ನಕಲಿ ನಂಬರ್ ಪ್ಲೇಟ್ ಅಳವಡಿಸಿದರೆ ದನಗಳ್ಳತನದ ವೇಳೆ ಪೊಲೀಸರು ಅಥವಾ ಸಾರ್ವಜನಿಕರಿಗೆ ಸಿಕ್ಕಿಬಿದ್ದರೂ ವಾಹನದ ಗುರುತುಪತ್ತೆಯಾಗದಂತೆ ಮಾಡುವ ತಂತ್ರಗಾರಿಕೆಯನ್ನು ರೂಪಿಸಿದ್ದಾರೆ.